ಕುಶಾಲನಗರ, ನ. 28: ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಕುಶಾಲನಗರದ ಜಿಎಂಪಿ ಶಾಲಾ ಆವರಣದಲ್ಲಿ ಚಾಲನೆ ನೀಡಲಾಯಿತು.

ಕುಶಾಲನಗರ ಹಾಗೂ ಸುಂಟಿಕೊಪ್ಪ ಹೋಬಳಿಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರವಾಸಕ್ಕೆಂದು ತೆರಳುವ ವಿದ್ಯಾರ್ಥಿಗಳ ಸುರಕ್ಷತೆಗೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದರು

4 ದಿನಗಳ ಪ್ರವಾಸದಲ್ಲಿ 180 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ಮೈಸೂರು, ಬೆಂಗಳೂರು ಹಾಗೂ ಶ್ರವಣಬೆಳಗೊಳದ ಹಲವು ಪ್ರೇಕ್ಷಣಿಯ ಸ್ಥಳಗಳಿಗೆ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಶಿಕ್ಷಣ ಸಂಯೋಜಕ ರಾಧಾಕೃಷ್ಣ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳ ಪೆÇೀಷಕರು ಇದ್ದರು.