ಮಡಿಕೇರಿ, ನ. 28: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಸೈಂಟ್ ಆನ್ಸ್ ಪದವಿ ಕಾಲೇಜಿನ ವತಿಯಿಂದ ಡಿಸೆಂಬರ್ 3 ರಿಂದ 9 ರವರೆಗೆ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ.

ಶಿಬಿರದ ಉದ್ಘಾಟನಾ ಸಮಾರಂಭ ಡಿ. 3 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಜಿ.ಪಂ. ಸದಸ್ಯರಾದ ಎಂ. ಶಶಿ ಸುಬ್ರಮಣಿ, ಅಮ್ಮತ್ತಿ ಸ.ಮಾ.ಪ್ರಾ. ಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಹೆಚ್.ಇ. ರಾಣಿ, ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಕಿರಣ್ ಕಾರ್ಯಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

ಶಿಬಿರದ ಸಮಾರೋಪ ಸಮಾರಂಭ ಡಿ. 9 ರಂದು ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಧ್ವಜಾರೋಹಣ, ಕಾರ್ಮಾಡು ಗ್ರಾ.ಪಂ. ಸದಸ್ಯರಾದ ಕೆ.ಎಂ. ಹಂಸ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ, ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ವೀರಾಜಪೇಟೆ ತಾಲೂಕು ಪೊಲೀಸ್ ಉಪಾಧೀಕ್ಷಕ ಸಿ.ಟಿ. ಜಯಕುಮಾರ್, ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ ಮದಲೈ ಮುತ್ತು, ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್, ಕಾರ್ಮಾಡು ಗ್ರಾ.ಪಂ. ಅಧ್ಯಕ್ಷರಾದ ರೋನಾ ಭೀಮಯ್ಯ, ಅಮ್ಮತ್ತಿ ಗ್ರಾ.ಪಂ. ಅಧ್ಯಕ್ಷೆ ಶಾಂತ ಪಿ.ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.