ವೀರಾಜಪೇಟೆ, ನ. 28: ಕನ್ನಡ ಜಾನಪದ ಪರಿಷತ್, ವೀರಾಜಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆ ಮತ್ತು ವಿಶ್ವ ಜಾನಪದ ದಿನಾಚರಣೆ ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ತಾ. 29 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್ ಬಾಲಾಜಿ ಉದ್ಘಾಟಿಸಲಿದ್ದಾರೆ. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ತಾತಂಡ ಜ್ಯೋತಿ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದು, ವೀರಾಜಪೇಟೆ ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಿ ಮುಖ್ಯಭಾಷಣ ಮಾಡಲಿದ್ದಾರೆ.

ಕನ್ನಡ ಜಾನಪದ ಪರಿಷತ್ತಿನ ಖಜಾಂಚಿ ಡಾ.ಕನಕತಾರ, ಮೈಸೂರು ಜಿಲ್ಲೆ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಕ್ಯಾತನಹಳ್ಳಿ ಎಸ್. ಪ್ರಕಾಶ್, ಅಂತರ್ರಾಷ್ಟ್ರೀಯ ಖ್ಯಾತ ಗಾಯಕ ಅಮ್ಮ ರಾಮಚಂದ್ರ, ಗೋಣಿಕೊಪ್ಪ ಕಾವೇರಿ ಕಾಲೇಜಿನ ನಿವೃತ್ತ ಆಂಗ್ಲ ಪ್ರಾಧ್ಯಾಪಕಿ ಅಯ್ಯಂಡ ಜ್ಯೋತಿ ಈರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಪಟ್ಟಣ ಪಂಚಾಯಿತಿ ಸದಸ್ಯೆ ಆಶಾ ಸುಬ್ಬಯ್ಯ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜಾನಪದ ಕಲಾವಿದೆ ಸುಳ್ಳಿಮಾಡ ಗೌರು ನಂಜಪ್ಪ, ಬುಡಕಟ್ಟು ಕೃಷಿಕ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ ಅವರುಗಳನ್ನು ವಿಶೇಷವಾಗಿ ಸನ್ಮಾನಿಸಲಾಗುತ್ತದೆ.

ಸಭಾ ಕಾರ್ಯಕ್ರಮದ ಬಳಿಕ ಅಮ್ಮರಾಮಚಂದ್ರ ಅವರಿಂದ ಜಾನಪದ ಗೀತಾಗಾಯನ ಮತ್ತು ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು, ವೀರಾಜಪೇಟೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಜಾನಪದ ನೃತ್ಯ ಕಾರ್ಯಕ್ರಮ ನಡೆಯಲಿದೆ.