ಮಡಿಕೇರಿ, ನ. 28: ನಗರಸಭಾ ವ್ಯಾಪ್ತಿಯಲ್ಲಿ ಬೀಡಾಡಿ ದನಗಳು ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಓಡಾಡಲು ತೊಂದರೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಮಾಲೀಕರು ದನಗಳನ್ನು ರಸ್ತೆಗೆ ಬಿಡದೆ ತಮ್ಮ ಸ್ವಂತ ಜಾಗದಲ್ಲಿ ಕಟ್ಟಿ ಹಾಕಿಕೊಳ್ಳಬೇಕು. ತಪ್ಪಿದಲ್ಲಿ ನಗರಸಭೆ ವತಿಯಿಂದ ಬಿಡಾಡಿ ದನಗಳನ್ನು ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.