ಚೆಟ್ಟಳ್ಳಿ, ನ. 29: ವೀರಾಜಪೇಟೆ ತಾಲೂಕಿನ ಇಂಜಿಲಗೆರೆಯ ಪಿ.ವಿ. ಜಾನ್ಸನ್ ಅವರನ್ನು ಸೋನಿಯಾ ಗಾಂಧಿ ಬ್ರಿಗೇಡ್‍ನ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇತ್ತೀಚೆಗೆ ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಪಿ.ವಿ. ಜಾನ್ಸನ್ ಅವರ ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾಗಿ. ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷರಾಗಿ ಹಾಗೂ ಕೆಪಿಸಿಸಿ ಮಾಸ್ಟರ್ ಟ್ರೈನರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.