ಮಡಿಕೇರಿ: ಗೋಣಿಕೊಪ್ಪಲಿನ ಶ್ರೀ ದುರ್ಗಾ ಸಂಗೀತ ಶಾಲೆಯ ಮಕ್ಕಳಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶಾಲಾ ಮಕ್ಕಳಿಂದ ಸಂಗೀತ ಕಾರ್ಯಕ್ರಮ, ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಸಂಗೀತ ಶಿಕ್ಷಕಿ ಚಂದ್ರಕಲಾ ಮೂರ್ತಿಯವರಿಂದ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಸೈಕ್ಲೋನ್ ನೃತ್ಯ ಸಂಸ್ಥೆಯ ಶಿಕ್ಷಕ ರಮೇಶ್ ಅವರು ಮತ್ತು ಮಕ್ಕಳ ಪೋಷಕರು ಪಾಲ್ಗೊಂಡಿದ್ದರು.ವೀರಾಜಪೇಟೆ: ವೀರಾಜಪೇಟೆಯ ಕಾವೇರಿ ಶಾಲೆಯಲ್ಲಿ ಇತ್ತೀಚೆಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ನಡೆಸಿದರು.
ರಂಗು ರಂಗಿನ ಉಡುಪನ್ನು ತೊಟ್ಟು ಕಂಗೊಳಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲವಾರು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಭೋಜನದ ನಂತರ ವಿದ್ಯಾರ್ಥಿಗಳನ್ನು ಶಿಕ್ಷಕರು ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಮನರಂಜಿಸಿದರು. ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಹಾಗೂ ವಿನೋದ್ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಶಾಲೆಯ ಮುಖ್ಯ ಶಿಕ್ಷಕಿಯರು ಉಪಸ್ಥಿತರಿದ್ದರು.
ವೀರಾಜಪೇಟೆಯ ಇಕ್ಯೂ ಬೀಟ್ಸ್ ತಂಡದವರು ತಮ್ಮ ಪ್ರಥಮ ಲೈವ್ ಬ್ಯಾಂಡ್ ಶೋವಿನ ಉದ್ಘಾಟನೆಯನ್ನು ಶಾಲೆಯಲ್ಲಿ ನೆರವೇರಿಸಿ ವಿದ್ಯಾರ್ಥಿಗಳನ್ನು ನೃತ್ಯ ಹಾಗೂ ಗಾಯನ ಕಾರ್ಯಕ್ರಮದ ಮೂಲಕ ರಂಜಿಸಿದರು.