ಮಡಿಕೇರಿ, ನ. 30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿಶೇಷ ಮಕ್ಕಳ ಶಾಲೆಗಳು, ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಡಿ. 3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ನಡೆಯಲಿದೆ.
ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಸಂಸದÀ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್, ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷÀ ಜೆ.ಮಹೇಶ್ವರ್, ಎಸ್‍ವಿವೈಎಂ. ಅಧ್ಯಕ್ಷ ಎಂ.ಆರ್.ಸೀತರಾಮ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಇತರರು ಪಾಲ್ಗೊಳ್ಳಲಿದ್ದಾರೆ.