ಮಡಿಕೇರಿ, ನ.30: ತೀವ್ರಗೊಂಡ ಮಿಷನ್ ಇಂದ್ರಧನುಷ್ 2.0 ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಡಿ.2 ರಂದು ಬೆಳಿಗ್ಗೆ 10.30 ಗಂಟೆಗೆ ವೀರಾಜಪೇಟೆ ತಾಲೂಕು ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದ, ಹೆಬ್ಬಾಲೆಯ ರೇಷ್ಮೆ ಹಾಡಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.