ಕುಶಾಲನಗರ, ನ. 30: ಹಾನಗಲ್ಲು ಶೆಟ್ಟಳ್ಳಿಯಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡಿರುವ ಅಂಧ ಟೈಲರ್ ರುದ್ರಾಚಾರಿ ಅವರಿಗೆ ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯ ಆಡಳಿತ ಮಂಡಳಿ ವತಿಯಿಂದ 10 ಸಾವಿರ ರೂಪಾಯಿ ಧನ ಸಹಾಯ ಮಾಡಲಾಯಿತು. ರುದ್ರಾಚಾರಿ ಅವರ ಮನೆಯ ಛಾವಣಿ ಕಳೆದ ಮಳೆಗಾಲದಲ್ಲಿ ಸಂಪೂರ್ಣ ಕುಸಿದು ಹೋಗಿತ್ತು.