ಮಡಿಕೇರಿ, ಡಿ. 2: ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಎರವ ಮತ್ತು ಸೋಲಿಗ ಜನಾಂಗದವರಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಕಂಪ್ಯೂಟರ್ ತರಬೇತಿ, ವಾಹನ ಚಾಲನಾ ತರಬೇತಿ, ಹೊಲಿಗೆ ತರಬೇತಿ, ಬಾರ್‍ಬೆಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡದ ಎರವ ಮತ್ತು ಸೋಲಿಗ ಜನಾಂಗದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೋರಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು (ಗ್ರೇಡ್-2) ಅವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಇಲ್ಲಿಗೆ ತಾ. 5 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.