ಮಡಿಕೇರಿ, ಡಿ. 2: ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಇದೇ ತಾ. 4 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕೊಡಿಮರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವದು ಎಂದು ತಕ್ಕ ಮುಖ್ಯಸ್ಥರು ತಿಳಿಸಿದ್ದಾರೆ. ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಟ್ಟಿರುವ ಈ ದೇವಾಲಯವನ್ನು ಭಕ್ತರು ಹಾಗೂ ದಾನಿಗಳ ನೆರವಿನಿಂದ ಜೀರ್ಣೋದ್ಧಾರಗೊಳಿಸಲಾಗುತ್ತಿದ್ದು, ರೂ. 13 ಲಕ್ಷದಲ್ಲಿ ತಾಮ್ರದ ಕವಚ ಸಹಿತ ಕೊಡಿಮರ (ಧ್ವಜಸ್ತಂಭ) ನಿರ್ಮಿಸಲಾಗುತ್ತಿದೆ ಎಂದು ಪ್ರಮುಖರು ತಿಳಿಸಿದ್ದಾರೆ. ಅಲ್ಲದೆ ಕ್ಷೇತ್ರದ ಅಭಿವೃದ್ಧಿಗೆ ಅಯ್ಯುಡ ವೇಣು ಉತ್ತಪ್ಪ ಅವರ ಗೌರವ ಅಧ್ಯಕ್ಷತೆಯಲ್ಲಿ ಚೌರೀರ ಬೋಪಯ್ಯ, ಎಡಿಕೇರಿ ವಾಸುದೇವ್, ಮೇಪಾಡಂಡ ವೇಣು ಉತ್ತಪ್ಪ ಅವರುಗಳನ್ನು ಒಳಗೊಂಡಿರುವ ಸಮಿತಿ ರಚಿಸಿದ್ದು, ತಂತ್ರಿಗಳ ಮಾರ್ಗದರ್ಶನದಂತೆ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.