ಮಡಿಕೇರಿ, ಡಿ. 2: 2018-19ರ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಜಿಲ್ಲೆಗೊಂದರಂತೆ ಇರುವ ವೃದ್ಧಾಶ್ರಮಗಳನ್ನು ರಾಜ್ಯದ ಎಲ್ಲಾ ಉಪ ವಿಭಾಗಗಳಿಗೆ ಒಂದರಂತೆ ವಿಸ್ತರಿಸಿದ್ದು, ಜಿಲ್ಲೆಯ ಮಡಿಕೇರಿ ಉಪ ವಿಭಾಗದಲ್ಲಿ ವೃದ್ಧಾಶ್ರಮ ಪ್ರಾರಂಭಿಸಲು ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತಾ. 13 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿಗಳು, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯ ಸಹಾಯವಾಣಿ ಸಂಖ್ಯೆ. 08272-222830 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್. ಸಂಪತ್‍ಕುಮಾರ್ ತಿಳಿಸಿದ್ದಾರೆ.