ಮಡಿಕೇರಿ, ಡಿ. 2: ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಾಧಕ ಶಿಕ್ಷಕರಿಗೆ ರಾಜ್ಯೋತ್ಸವ ಶಿಕ್ಷಕ ಪುರಸ್ಕಾರ ನೀಡಿ ಗೌರವಿಸಲಾ ಯಿತು. ಐವರು ಸಾಧಕ ಗುರುಗಳಿಗೆ ವಿಶೇಷ ಸನ್ಮಾನ ನೀಡಲಾಯಿತು.

ರಾಷ್ಟ್ರ ಪ್ರಶಸ್ತಿ ಪುರಸ್ಕøತ ಸುರೇಶ್ ಮರಕಾಲ, ಡಯಟ್ ಉಪನ್ಯಾಸಕ ಕೆ.ವಿ. ಸುರೇಶ್, ನಾಪೋಕ್ಲು ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಡಾ. ಅವನಿಜ ಸೋಮಯ್ಯ, ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ ಅವರಿಗೆ ವಿಶೇಷ ಸನ್ಮಾನ ಮಾಡಲಾಯಿತು.

ಡಿ. ದೇವರಾಜ ಅರಸು ಭವನದಲ್ಲಿ ಶನಿವಾರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕ ಶಿಕ್ಷಕರಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು. ಪಿಲಿಪ್‍ವಾಸ್, ಉ.ರಾ. ನಾಗೇಶ್, ಉಷಾರಾಣಿ ನೇತೃತ್ವದ ಸಮಿತಿ ಸಾಧಕ ಗುರುಗಳನ್ನು ಆಯ್ಕೆ ಮಾಡಿದರು.

ಪುರಸ್ಕಾರಕ್ಕೆ ಅರ್ಜಿ ಹಾಕದಿದ್ದರೂ ಗುರುತಿಸಿ ಆಯ್ಕೆ ಮಾಡಿರುವದಕ್ಕೆ ಗುರುಗಳು ಪುಳಕಿತಗೊಂಡಿದ್ದರು. ತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ ಗುರುಗಳು ಪುರಸ್ಕಾರ ಸ್ವೀಕರಿಸುವ ವೇಳೆ ಭಾವುಕರಾಗಿದ್ದರು. ಕೆಲವು ಗುರುಗಳು ತಮ್ಮ ಗುರುಗಳಾಗಿರುವ ತಮ್ಮ ಶಿಷ್ಯರೊಂದಿಗೆ ಪುರಸ್ಕಾರ ಸ್ವೀಕರಿಸುವ ಅವಕಾಶ ಸಿಕ್ಕಿದ್ದಕ್ಕೆ ಹರ್ಷಗೊಂಡಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಿರುವ ಅತ್ಯುತ್ತಮ ಶಿಕ್ಷಕರನ್ನು ಪುರಸ್ಕಾರಕ್ಕೆ ಗುರುತಿಸಲಾಗಿದೆ. ಇದು ಪ್ರಥಮ ಪ್ರಯತ್ನವಾಗಿದ್ದು, ಎಲ್ಲ ಅತ್ಯುತ್ತಮ ಶಿಕ್ಷಕರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಲೋಕೇಶ್ ಸಾಗರ್ ಕಸಾಪ ಜಿಲ್ಲಾಧ್ಯಕ್ಷರಾದ ಬಳಿಕ ಹೊಸ ಹೊಸ ಪ್ರಯತ್ನ ಮಾಡುವದರ ಮೂಲಕ ಗಮನ ಸೆಳೆದಿದ್ದಾರೆ. ಮಕ್ಕಳನ್ನು ರೂಪಿಸುವ ಗುರುಗಳಿಗೆ ಗೌರವ ಸಲ್ಲಿಸುವುದ ಒಳ್ಳೆಯ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅತಿಥಿಗಳಾಗಿ ಕೊಡಗು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಪಿಲಿಪ್‍ವಾಸ್, ಕೊಡಗು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಸ್. ಚೇತನ್ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ಪ್ರಮುಖರಾದ ಕೋಡಿ ಚಂದ್ರಶೇಖರ್, ಉ.ರಾ. ಶ್ರೀ ನಿವಾಸ್, ಧನಂಜಯ, ಅಮೆಚೂರು ಲೋಕೇಶ್ ಮತ್ತಿತರರು ಇದ್ದರು.

ಪ್ರಾಥಮಿಕ ಶಾಲಾ ವಿಭಾಗದ ಸನ್ಮಾನಿತರು

ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನೆಲ್ಯಹುದಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಭಾರತಿ, ನ್ಯಾಯದಹಳ್ಳ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಜಿ.ಟಿ. ಕವಿತಾ, ನೆಲಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಪಿ.ಎಚ್. ಐಮದೆ, ಒಂಟಿಯಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಮಂಜುನಾಥ್, ಪೆರಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಮೋಹನ್ ಪೆರಾಜೆ, ಹಟ್ಟಿಹೊಳೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಾಂತಾಶೀಲಾ, ಎಲಿಯಂಗಾಡ್ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸುಬ್ರಮಣ್ಯ ಅವರನ್ನು ಸನ್ಮಾನಿಸಲಾಯಿತು.

ಕಾಲೇಜು ವಿಭಾಗದ ಸನ್ಮಾನಿತರು

ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಮಡಿಕೇರಿ ಸರಕಾರಿ ಮಹಿಳಾ ಪದವಿ ಕಾಲೇಜು ಪ್ರಾಧ್ಯಾಪಕಿ ಡಾ. ಕೋರನ ಸರಸ್ವತಿ, ವೀರಾಜಪೇಟೆ ಕಾವೇರಿ ಕಾಲೇಜು ಉಪನ್ಯಾಸಕಿ ಡಾ. ಮುಲ್ಲೇಂಗಡ ರೇವತಿ ಪೂವಯ್ಯ, ವೀರಾಜಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಪ್ರೊ. ಜ್ಯೋತಿ, ಬಾಳೆಲೆ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಶ್ವಿನ್‍ಕುಮಾರ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ದಿವಾಕರ್, ಸೋಮವಾರಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ತಿಲೋತ್ತಮೆ, ಸುಂಟಿ ಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಈಶ ಅವರಿಗೆ ಪುರಸ್ಕಾರ ನೀಡಲಾಯಿತು.

ಪ್ರೌಢಶಾಲಾ ವಿಭಾಗ: ಹೆಬ್ಬಾಲೆ ಪ್ರೌಢಶಾಲೆ ಶಿಕ್ಷಕ ವೆಂಕಟ್ ನಾಯಕ್, ಕೊಡ್ಲಿಪೇಟೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಂ.ಎಸ್. ಅಬ್ದುಲ್ ರಬ್, ಮೂರ್ನಾಡು ಪ್ರೌಢಶಾಲೆ ಶಿಕ್ಷಕ ಪ್ರಶಾಂತ್, ಪೊನ್ನಂಪೇಟೆ ಸರಕಾರಿ ಪ್ರೌಢಶಾಲೆ ಶಿಕ್ಷಕ ನೂತನ್‍ಕುಮಾರ್, ಕುಶಾಲನಗರ ಫಾತಿಮಾ ಪ್ರೌಢಶಾಲೆ ಶಿಕ್ಷಕಿ ಮಮತಾ ಕ್ರಾಸ್ತ ಅವರನ್ನು ಸನ್ಮಾನಿಸಲಾಯಿತು.