ಸಿದ್ದಾಪುರ, ಡಿ. 1: ಈ ಬಾರಿಯ ಪ್ರವಾಹಕ್ಕೆ ಸಿಲುಕಿ ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಗ್ರಾಮಗಳಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರವನ್ನು ತ್ವರಿತವಾಗಿ ನೀಡುವದಾಗಿ ವೀರಾಜ ಪೇಟೆ ತಹಶೀಲ್ದಾರ್ ಮಹೇಶ್ ತಿಳಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾಮಳೆಗೆ ಕರಡಿಗೋಡು ಹಾಗೂ ಗುಹ್ಯ ಗ್ರಾಮಗಳಲ್ಲಿ ಪ್ರವಾಹಕ್ಕೆ ಸಿಲುಕಿ ನೂರಾರು ಮನೆಗಳು ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ತುರ್ತು ಪರಿಹಾರವಾಗಿ ಜಿಲ್ಲಾಡಳಿತದ ವತಿಯಿಂದ ರೂ. 10,000 ಹಾಗೂ ರೂ. 25,000 ವನ್ನು ನೀಡಲಾಗಿತ್ತು. ಆದರೆ 60ಕ್ಕೂ ಅಧಿಕ ಕುಟುಂಬಗಳಿಗೆ ತುರ್ತು ಪರಿಹಾರ ಸಿಗಲಿಲ್ಲ. ಇತ್ತೀಚೆಗೆ ಸಿದ್ದಾಪುರದ ಸಂತ್ರಸ್ತರ ಹೋರಾಟ ಸಮಿತಿಯ ವತಿಯಿಂದ ಸಿದ್ದಾಪುರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳ ಬಳಿ ತುರ್ತು ಪರಿಹಾರ ಸಿಗದಿರುವ ಸಿದ್ದಾಪುರ, ಡಿ. 1: ಈ ಬಾರಿಯ ಪ್ರವಾಹಕ್ಕೆ ಸಿಲುಕಿ ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಗ್ರಾಮಗಳಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರವನ್ನು ತ್ವರಿತವಾಗಿ ನೀಡುವದಾಗಿ ವೀರಾಜ ಪೇಟೆ ತಹಶೀಲ್ದಾರ್ ಮಹೇಶ್ ತಿಳಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾಮಳೆಗೆ ಕರಡಿಗೋಡು ಹಾಗೂ ಗುಹ್ಯ ಗ್ರಾಮಗಳಲ್ಲಿ ಪ್ರವಾಹಕ್ಕೆ ಸಿಲುಕಿ ನೂರಾರು ಮನೆಗಳು ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ತುರ್ತು ಪರಿಹಾರವಾಗಿ ಜಿಲ್ಲಾಡಳಿತದ ವತಿಯಿಂದ ರೂ. 10,000 ಹಾಗೂ ರೂ. 25,000 ವನ್ನು ನೀಡಲಾಗಿತ್ತು. ಆದರೆ 60ಕ್ಕೂ ಅಧಿಕ ಕುಟುಂಬಗಳಿಗೆ ತುರ್ತು ಪರಿಹಾರ ಸಿಗಲಿಲ್ಲ. ಇತ್ತೀಚೆಗೆ ಸಿದ್ದಾಪುರದ ಸಂತ್ರಸ್ತರ ಹೋರಾಟ ಸಮಿತಿಯ ವತಿಯಿಂದ ಸಿದ್ದಾಪುರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳ ಬಳಿ ತುರ್ತು ಪರಿಹಾರ ಸಿಗದಿರುವ ವಿಳಂಬವಾಗುತ್ತಿರುವ ಶಾಶ್ವತ ಸೂರು: ಪ್ರವಾಹಕ್ಕೆ ಸಿಲುಕಿ ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ಭಾಗದ ನದಿ ತೀರದ ನೂರಾರು ಮನೆಗಳು ಹಾನಿಯಾಗಿದ್ದು ನೂರಾರು ಮನೆಗಳು ಸಂಪೂರ್ಣವಾಗಿ ನೆಲಸಮ ಗೊಂಡಿತ್ತು. ನೆಲ್ಯಹುದಿಕೇರಿಯ ಸಂತ್ರಸ್ತರು ಕಳೆದ ಮೂರುವರೆ ತಿಂಗಳಿನಿಂದ ಸ್ಥಳೀಯ ಸರಕಾರಿ ಪ್ರಾಥಮಿಕ ಶಾಲೆಯ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದು ಶಾಶ್ವತ ಸೂರಿಗಾಗಿ ಕಾಯುತ್ತಿದ್ದಾರೆ. ಜಿಲ್ಲಾಡಳಿತವು ಸಂತ್ರಸ್ತರಿಗಾಗಿ ಗುರುತಿಸಿದ ಒತ್ತುವರಿ ಜಾಗದ ಮಾಲಿಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಶಾಶ್ವತ ಸೂರು ಒದಗಿಸಲು ವಿಳಂಬ ವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ಅಧಿಕಾರಿಗಳು ತಡೆಯಾಜ್ಞೆಯನ್ನು ತೆರವುಗೊಳಿಸಲು ಭೂ ನ್ಯಾಯ ಮಂಡಳಿ ಮುಖಾಂತರ ಪ್ರಯತ್ನಿ ಸುತ್ತಿದ್ದು ಸದ್ಯದಲ್ಲೇ ಒತ್ತುವರಿ ದಾರರಿಂದ ಕ್ರಮಬದ್ಧವಾಗಿ ಕಾನೂನಿನ ಮುಖಾಂತರ ಜಿಲ್ಲಾಡಳಿತದ ವಶಕ್ಕೆ ಪಡೆದುಕೊಂಡು ಸಂತ್ರಸ್ತರಿಗೆ ಸೂರು ಒದಗಿಸಲು ಪ್ರಯತ್ನಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ತಮಗೆ ಶಾಶ್ವತ ಸೂರು ಸಿಗಬಹುದೆಂಬ ನಿರೀಕ್ಷೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ನದಿ ತೀರದ ನಿವಾಸಿಗಳು ತಾತ್ಕಾಲಿಕ ಶೆಡ್ಡಿನಲ್ಲಿ ವಾಸ ಮಾಡಿಕೊಂಡಿದ್ದಾರೆ.
ಸಂತ್ರಸ್ತರಿಗೆ ಗುರುತಿಸಿದ ಜಾಗ ಅರಣ್ಯ ಪ್ರದೇಶದ ಬಳಿ : ಕರಡಿಗೋಡು ಹಾಗೂ ಗುಹ್ಯ ಗ್ರಾಮದ ನದಿ ತೀರದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸಿ ಕೊಡುವ ನಿಟ್ಟಿನಲ್ಲಿ ವೀರಾಜಪೇಟೆ ತಾಲೂಕು ಕಂದಾಯ ಇಲಾಖಾ ಅಧಿಕಾರಿಗಳು ಜಿಲ್ಲಾಡಳಿತ ಮುಖಾಂತರ ಜಾಗವನ್ನು ಖಾಸಗಿ ವ್ಯಕ್ತಿಗಳಿಂದ ಖರೀದಿಸಿ ಶಾಶ್ವತ ಸೂರು ಒದಗಿಸಲು 10 ಏಕರೆ ಜಾಗವನ್ನು ಖರೀದಿಸಿ ನಿವೇಶನ ಮಾಡಲು ಜಾಗವನ್ನು ಗುರುತಿಸಿದ್ದರು. ಆದರೆ ಗುರುತಿಸಿದ್ದ ಜಾಗವು ಅರಣ್ಯ ಪ್ರದೇಶದ ಬಳಿ ಇರುವ ಹಿನ್ನೆಲೆಯಲ್ಲಿ ಆ ಜಾಗವನ್ನು ನೀಡಲು ಸಾಧ್ಯವಿಲ್ಲವೆಂದು ಕಂದಾಯ ಇಲಾಖೆಯ ಗಮನಕ್ಕೆ ಬಂದಿದ್ದು ಇದೀಗ ಆ ಜಾಗವನ್ನು ಕೈಬಿಡಲಾಗಿದೆ. ಪರ್ಯಾಯ ಜಾಗವನ್ನು ಕಂದಾಯ ಇಲಾಖಾ ಅಧಿಕಾರಿಗಳು ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.
ಚಿತ್ರ ವರದಿ : ವಾಸು