ಮಡಿಕೇರಿ, ಡಿ.2: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಆಯೋಜಿಸಿದ್ದು, ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‍ಗಳು ಪ್ರಸಕ್ತ ಸಾಲಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವದು.
ಆಸಕ್ತರು ತಾ. 10 ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ನ್ನು ಸಂಪರ್ಕಿಸಬಹುದು ಎಂದು ಕುಲಸಚಿವÀ ಪ್ರೊ.ಬಿ.ರಮೇಶ್ ತಿಳಿಸಿದ್ದಾರೆ.