ಸಿದ್ದಾಪುರ, ಡಿ. 2 : ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ಥಾನದಲ್ಲಿ ಹುಲಿಯ ಚಲನವಲನ ಸೆರೆಹಿಡಿಯಲು ಮತ್ತೆರಡು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಕುಶಾಲನಗರ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಗೂಳಿ ತಿಳಿಸಿದ್ದಾರೆ ಈಗಾಗಲೇ ಅಳವಡಿಸಿರುವ ಕ್ಯಾಮರಾಗಳಲ್ಲಿ ಹುಲಿಯ ಯಾವದೇ ಗುರುತುಗಳು ಸೆರೆಯಾಗದೆ ಹಿನ್ನೆಲೆಯಲ್ಲಿ ಇದೀಗ ಮತ್ತೆರಡು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹುಲಿಯ ಚಲನವಲನ ಕಂಡುಹಿಡಿಯಲು ಅಳವಡಿಸಿದ್ದ ಕ್ಯಾಮರಾದಲ್ಲಿ ಕಾಡಾನೆಯೊಂದು ಓಡಾಡುತ್ತಿರುವ ದೃಶ್ಯ ಕಂಡು ಬಂದಿದೆ.