ಸೋಮವಾರಪೇಟೆ, ಡಿ. 2: ಇಲ್ಲಿನ ಇಂದಿರಾಗಾಂಧಿ ಅಭಿಮಾನಿ ಗಳ ಸಂಘದ ವತಿಯಿಂದ ತಾ.20 ಮತ್ತು 21ರಂದು ಸ್ಥಳೀಯ ಸಾಕಮ್ಮನ ಬಂಗಲೆ ಎದುರಿನ ಮೈದಾನದಲ್ಲಿ 33ನೇ ವರ್ಷದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಎ. ನಾಗರಾಜ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿ ಹುಟ್ಟುಹಬ್ಬದ ಪ್ರಯುಕ್ತ ಸಂಘ ಕಳೆದ 32 ವರ್ಷಗಳಿಂದ ಸತತವಾಗಿ ರಾಜ್ಯಮಟ್ಟದ ಕಬಡ್ಡಿ, ಥ್ರೋಬಾಲ್, ವಾಲಿಬಾಲ್, ಕುಸ್ತಿ, ಕೇರಂ, ಸೈಕಲ್ ಸ್ಪರ್ಧೆ, ರಸ್ತೆ ಓಟ, ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ನಡೆಸಿಕೊಂಡು ಬಂದಿದೆ. ಪ್ರಸಕ್ತ ಸಾಲಿನಲ್ಲಿ ತಾ. 20ರಂದು ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ತಾ. 21 ರಂದು ಸಾರ್ವಜನಿಕರಿಗೆ ಪ್ರತ್ಯೇಕವಾಗಿ ರಾಜ್ಯ ಮಟ್ಟದ ಕಬಡ್ಡಿ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
ತಾ. 21ರಂದು ಸಂಜೆ 6 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಉದ್ಯಮಿ, ದಾನಿಗಳಾದ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಲಾಗುವದು. ವಿಜೇತ ತಂಡಗಳಿಗೆ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುವದು. ತಾ.24ರಂದು ಸಂಘದ ವತಿಯಿಂದ ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಲು ಪಟ್ಟಣ ದಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಲಾಗುವದು ಎಂದು ಮಾಹಿತಿ ನೀಡಿದರು.
ಕ್ರೀಡಾಕೂಟದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ: 9449791791, 9483843395 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ನಾಗರಾಜ್ ತಿಳಿಸಿದರು.
ಇಂದಿರಾ ಕ್ಯಾಂಟೀನ್ ನಿರ್ಮಿಸಲು ಆಗ್ರಹ: ಇದೇ ಸಂದರ್ಭ ಮಾತನಾಡಿದ ನಾಗರಾಜ್ ಅವರು, ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದ ಸಂದರ್ಭ, ಬಡವರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಸೌಲಭ್ಯ ಬಹುತೇಕ ಕಡೆಗಳಲ್ಲಿ ಪ್ರಾರಂಭಿ¸ Àಲಾಗಿದ್ದರೂ, ಸೋಮವಾರ ಪೇಟೆಯಲ್ಲಿ ಇನ್ನೂ ಕಟ್ಟಡ ನಿರ್ಮಿಸಿಲ್ಲ. ಕ್ಯಾಂಟೀನ್ ಕಟ್ಟಡ ನಿರ್ಮಿಸಲು ತಳಪಾಯ ಹಾಕಿ ವರ್ಷಗಳೇ ಕಳೆದಿವೆ. ಇಂದಿಗೂ ಪೂರ್ಣಗೊಂಡಿಲ್ಲ. ಈ ಹಿನ್ನೆಲೆ ಕ್ರೀಡಾಕೂಟ ಮುಗಿದ ನಂತರ ಪಟ್ಟಣ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಕಾಲದವರೆಗೆ ಉಪವಾಸ ಸತ್ಯಾಗ್ರಹ ನಡೆಸಲಾಗು ವದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಿ. ರಾಜಪ್ಪ, ಸಂಚಾಲಕರಾದ ಗಿರೀಶ್, ಅಜಯ್, ಪದಾಧಿಕಾರಿಗಳಾದ ಮನೋಜ್ ಮತ್ತು ಸಂತೋಷ್ ಉಪಸ್ಥಿತರಿದ್ದರು.