ಸೋಮವಾರಪೇಟೆ, ಡಿ. 1: ಕಾಫಿ ಬೆಳೆಗಾರರು ತಮ್ಮ ತೋಟದ ಕೆಲಸಗಳಿಗೆ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟಗೊಳಿಸಲು ಕಾನೂನಿನ ನಿರ್ಬಂಧ ಇರುವ ಬಗ್ಗೆ ಚರ್ಚಿಸಲು ಕಾಫಿ ಬೆಳೆಗಾರರ ಹೋರಾಟ ಸಮಿತಿಯಿಂದ ತಾ. 2ರಂದು (ಇಂದು) ಪಟ್ಟಣದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮುದ್ದಪ್ಪ ತಿಳಿಸಿದ್ದಾರೆ.

ತಾ. 2ರಂದು (ಇಂದು) ಬೆಳಿಗ್ಗೆ 10.30ಕ್ಕೆ ಪಟ್ಟಣದ ಮಹಿಳಾ ಸಮಾಜದಲ್ಲಿ ಸಭೆ ನಡೆಯಲಿದ್ದು, ಮುಂದಿನ ಹೋರಾಟದ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸ ಲಾಗುವದು. ಕಾರ್ಮಿಕರ ಸಾಗಾಟಕ್ಕೆ ಕಾನೂನಿನ ಕಾರಣವೊಡ್ಡಿ ಭಾರೀ ಪ್ರಮಾಣದ ದಂಡ ವಿಧಿಸುತ್ತಿರು ವದರಿಂದ ಬೆಳೆಗಾರರು ಚಿಂತಾಕ್ರಾಂತರಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಹಿನ್ನೆಲೆ ಸಭೆ ಆಯೋಜಿಸಲಾಗಿದೆ ಎಂದು ಮುದ್ದಪ್ಪ ಮಾಹಿತಿ ನೀಡಿದ್ದಾರೆ.