ಮಡಿಕೇರಿ, ಡಿ. 3: ಸುಂಟಿಕೊಪ್ಪ 11/ಕೆವಿ ವಿದ್ಯುತ್ ಉಪ-ಕೇಂದ್ರದಲ್ಲಿ ಪವರ್ ಪರಿವರ್ತಕಕ್ಕೆ ಸುರಕ್ಷತಾ ಗೋಡೆಯನ್ನು ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಬೇಕಿರುವದರಿಂದ ತಾ. 4ರಂದು (ಇಂದು) ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಕೆದಕಲ್, ನಾಕೂರು, ಚೆಟ್ಟಳ್ಳಿ, ಸುಂಟಿಕೊಪ್ಪ, ಹೊಸಕೋಟೆ, ಮಾದಾಪುರ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.