ಭಾಗಮಂಡಲ, ಡಿ. 3: ಅರಣ್ಯ ಇಲಾಖೆ ಯಾವದೇ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕಟ್ಟಡವೊಂದನ್ನು ಕಟ್ಟುತ್ತಿದೆ ಎಂದು ಆರೋಪಿಸಿ ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಪಕ್ಕದಲ್ಲಿಯೇ ಸರ್ವೆ ನಂ. 2/6 ಪಿ ನಲ್ಲಿ ಮೀಸಲು ಅರಣ್ಯದಲ್ಲಿ ಕಟ್ಟಡವೊಂದನ್ನು ಸುಮಾರು ರೂ. 10 ಲಕ್ಷಗಳಲ್ಲಿ ನಿರ್ಮಾಣ ಕೆಲಸ ಆರಂಭವಾಗಿದ್ದು, ಅಡಿಪಾಯ ಕೆಲಸ ಮುಗಿದಿದ್ದು, ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆಯದೆ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.