ಮಡಿಕೇರಿ, ಡಿ.3: ಪ್ರಸಕ್ತ (2019-20) ಸಾಲಿನಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಮತ್ತು ಎಲ್ಲಾ ಅಭಿವೃದ್ಧಿ ಇಲಾಖೆಯ ಸಮನ್ವಯದೊಂದಿಗೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ವಿಶಿಷ್ಟ ಕಾರ್ಯಕ್ರಮ ‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಎಂಬ ಶೀರ್ಷಿಕೆಯಡಿ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ತಾ. 9 ರಂದು ಬೆಳಗ್ಗೆ 10.30 ಗಂಟೆಗೆ ಹೊಸೂರು ಗ್ರಾಮದ ಶ್ರೀ ಮಹದೇಶ್ವರ ಸಮುದಾಯ ಭವನದಲ್ಲಿ ಕೃಷಿ ವಸ್ತು ಪ್ರದರ್ಶನ ಮತ್ತು ರೈತ ಸಂವಾದದೊಂದಿಗೆ ನಡೆಯಲಿದೆ ಎಂದು ವೀರಾಜಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.