ಗೋಣಿಕೊಪ್ಪ ವರದಿ, ಡಿ. 3: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ 36 ವರ್ಷ ಕಾರ್ಯನಿರ್ವಹಿಸಿ ನಿವೃತ್ತರಾದ ಹೊಟ್ಟೇಂಗಡ ಪಾರ್ವತಿ ಅಯ್ಯಪ್ಪ ಅವರನ್ನು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದಿಂದ ಇತ್ತೀಚೆಗೆ ಸನ್ಮಾನಿಸಿ, ಬೀಳ್ಕೊಡುಗೆ ನೀಡಲಾಯಿತು.

ಸಮಿತಿ ಅಧ್ಯಕ್ಷ ಮಾಚಂಗಡ ಎ. ಸುಜಾ ಪೂಣಚ್ಚ, ಮಾಜಿ ಅಧ್ಯಕ್ಷ ಆದೇಂಗಡ ವಿನು ಚಂಗಪ್ಪ, ಪ್ರಭಾರ ಕಾರ್ಯದರ್ಶಿ ಎಸ್. ಶ್ರೀಧರ್ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು. ಪಾರ್ವತಿ ಅವರು ಕಚೇರಿಯಲ್ಲಿ ಬೆರಳಚ್ಚುಗಾರರಾಗಿ ಕೆಲಸ ಪ್ರಾರಂಭಿಸಿ, ಲೆಕ್ಕಿಗರಾಗಿ, ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.