ಮಡಿಕೇರಿ, ಡಿ. 3: ನಗರದ ಯುದ್ಧ ಸ್ಮಾರಕದ ಆವರಣದಲ್ಲಿ ತಾ. 7 ರಂದು ಬೆಳಿಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ. ಕರ್ನಲ್ (ನಿವೃತ್ತ) ಎನ್.ಸಿ. ನಂಜಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ ತಿಳಿಸಿದ್ದಾರೆ.