ಸೋಮವಾರಪೇಟೆ,ಡಿ.3: ಇಲ್ಲಿನ ವಕೀಲರ ಸಂಘದ ಆಶ್ರಯದಲ್ಲಿ ವಕೀಲರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಾರ್ ಅಸೋಷಿಯೇಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ವಹಿಸಿದ್ದರು. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿವಪುತ್ರ ದಿಂಡಲಕೊಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ, ಸಹಾಯಕ ಸರ್ಕಾರಿ ಅಭಿಯೋಜಕಿ ಅಶ್ವಿನಿ, ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಸ್. ಪದ್ಮನಾಭ್, ಕಾರ್ಯದರ್ಶಿ ಹೇಮಚಂದ್ರ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಮುಖರು ತಮ್ಮ ಭಾಷಣದಲ್ಲಿ, ಹಿರಿಯ ನೇತಾರ ಬಾಬು ರಾಜೇಂದ್ರ ಪ್ರಸಾದ್ ಅವರು ವಕೀಲ ವೃತ್ತಿಗೆ ನೀಡಿದ ಸೇವೆಯನ್ನು ಸ್ಮರಿಸಿದರು. ದಿನದ ಮಹತ್ವದ ಬಗ್ಗೆ ವಕೀಲರಾದ ಕೃಷ್ಣಕುಮಾರ್, ಕಾಟ್ನಮನೆ ವಿಠಲ್‍ಗೌಡ ಅವರುಗಳು ಮಾತನಾಡಿದರು.