ಮಡಿಕೇರಿ, ಡಿ. 3: ಮಾಜಿ ಸೈನಿಕರ ಸಮಾವೇಶ ತಾ. 11 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಪೊಲೀಸ್ ಮೈತ್ರಿ ಹಾಲ್‍ನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು, ಅಭಿಲೇಖಾ ಕಾರ್ಯಾಲಯ ಮತ್ತು ಪಿಂಚಣಿಗೆ ಸಂಬಂಧಿಸಿದ ಕುಂದುಕೊರತೆ ಪರಿಹರಿಸಿಕೊಳ್ಳಲು ಮತ್ತು ಮಾಜಿ ಸೈನಿಕರ ಕಲ್ಯಾಣ ಮತ್ತು ಪುನರ್ವಸತಿಗೆ ಸಂಬಂಧಿಸಿದಂತೆ ವಿಸ್ತರಿಸಲಾಗುವ ಎಲ್ಲಾ ಸೌಲಭ್ಯಗಳ ಮಾಹಿತಿಗಳಿಗೆ ಈ ಸಮಾವೇಶದಲ್ಲಿ ಮುಕ್ತವಾಗಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ ತಿಳಿಸಿದ್ದಾರೆ.