ಕೂಡಿಗೆ, ಡಿ. 3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕುಶಾಲನಗರ ತಾಲೂಕು ಕಸಾಪ ಕಾರ್ಯದರ್ಶಿ ಎನ್.ಆರ್. ನಾಗೇಶ್ ವಹಿಸಿದ್ದರು.

ಶಿಕ್ಷಕಿ ಮಾಲಾದೇವಿ ಸಾಹಿತಿ ವಿ.ಎಸ್. ರಾಮಕೃಷ್ಣ ಅವರ ಕೃತಿಗಳ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿಯನ್ನು ಈ ಹಂತದಲ್ಲಿಯೇ ಮೈಗೂಡಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ವಿಶೇಷ ಆಹ್ವಾನಿತರಾದ ಕೃಷ್ಣೇಗೌಡ, ಜಿಲ್ಲಾ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ, ತಾಲೂಕು ಶಿಕ್ಷಣ ಸಂಯೋಜಕ ಮೂರ್ತಿ, ಶಾಲೆಯ ಶಿಕ್ಷಕರಾದ ಚಿದಾನಂದ, ದಿನೇಶಾಚಾರಿ ಮತ್ತಿತರರು ಇದ್ದರು.