ಮಡಿಕೇರಿ, ಡಿ. 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ರಾಷ್ಟ್ರೀಯ ಆಯುಷ್ ಅಭಿಯಾನದಡಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಶಿಬಿರವು ತಾ. 6 ರಿಂದ (ಇಂದಿನಿಂದ) 9 ರವರೆಗೆ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಯಲಿದೆ.

ತಾ. 6 ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಆಯುಷ್ ನಿರ್ದೇಶನಾಲಯದ ಆಯುಕ್ತೆ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಎಚ್. ರಾಮಚಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.

ಶಿಬಿರವು ತಾ. 9ರ ವರೆಗೆ ಆರೋಗ್ಯ ಶಿಬಿರಗಳು ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಸರ್ಕಾರಿ ಬಸ್ ಡಿಪೋ ಎದುರು, ಕ್ರಿಸ್ಟಲ್ ಕೋರ್ಟ್ ಹತ್ತಿರ ನಡೆಯಲಿದ್ದು, ಮಧುಮೇಹ, ಸಂಧಿವಾತ, ಚರ್ಮದ ಖಾಯಿಲೆಗಳು, ಸ್ತ್ರೀ ರೋಗಗಳು, ಬಾಲ್ಯ ಮತ್ತು ವೃದ್ಧರ ತೊಂದರೆಗಳ ನಿವಾರಣೆಗೆ, ಎಲ್ಲಾ ಖಾಯಿಲೆಗಳಿಗೂ ಉಚಿತ ಚಿಕಿತ್ಸೆಯನ್ನು ಆಯುರ್ವೇದ ಹಾಗೂ ಹೋಮಿಯೋಪತಿ ಚಿಕಿತ್ಸಾ ಪದ್ಧತಿಯಲ್ಲಿ ಆಯುಷ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗಾಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಎಚ್. ರಾಮಚಂದ್ರ ಕೋರಿದ್ದಾರೆ.