ಕೂಡಿಗೆ, ಡಿ. 5: ಕೂಡಿಗೆಯ ಸೈನಿಕ ಶಾಲೆಯಲ್ಲಿ 2019-20ನೇ ಸಾಲಿನ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟವನ್ನು ಕೂಡಿಗೆಯ ಕ್ರೀಡಾ ಶಾಲೆಯ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಅಥ್ಲಿಟ್ ಕ್ರೀಡಾಪಟು, ಅರ್ಜುನ ಪ್ರಶಸ್ತಿ ವಿಜೇತೆÀ ಅಶ್ವಿನಿ ನಾಚಪ್ಪ ಕ್ರೀಡಾಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಚಿಕ್ಕ ವಯಸ್ಸಿನಲ್ಲೇ ಕ್ರೀಡೆಯ ಕುರಿತು ಆಸಕ್ತಿಯನ್ನು ಮೂಡಿಸಿಕೊಳ್ಳವತ್ತ ಮನಃಪೂರ್ವಕವಾಗಿ ಶ್ರಮಿಸಬೇಕು. ಪ್ರತಿಯೊಬ್ಬ ಸ್ಪರ್ಧಿಯು ಕ್ರೀಡಾ ಸ್ಪೂರ್ತಿಯಿಂದ ಪಾಲ್ಗೊಂಡು ಕ್ರೀಡೆಯ ಘನತೆಯನ್ನು ಉನ್ನತೀಕರಿಸಬೇಕು ಎಂದರು.
ಶಾಲೆಯ ಪ್ರಭಾರ ಪ್ರಾಂಶುಪಾಲ ಲೆಫ್ಟಿನೆಂಟ್ ಕರ್ನಲ್ ಸೀಮಾ ತ್ರಿಪಾಠಿ ಮಾತನಾಡಿದರು.
ಕ್ರೀಡಾ ಜ್ಯೋತಿಯನ್ನು ಕೆಡೆಟ್‍ಗಳಾದ ಲೋಕೇಶ್, ಅರುಣ್, ಸಚಿನ್ ಹಾಗೂ ನಿತಿನ್ ಮೈದಾನಕ್ಕೆ ತಂದರು.
ಕ್ರೀಡಾಕೂಟದಲ್ಲಿ 100 ಮೀ, 200 ಮೀ, 400 ಮೀ, 1500ಮೀ, 3000ಮೀ ಓಟ ಸ್ಪರ್ಧೆಗಳು, ಎತ್ತರ ಜಿಗಿತ, ಉದ್ದ ಜಿಗಿತ, ಡಿಸ್ಕಸ್ ಎಸೆತ, ಗುಂಡು ಎಸೆತ, ಹಗ್ಗ ಜಗ್ಗಾಟ, ಹರ್ಡಲ್ಸ ಓಟ, 4ಘಿ100 ಮೀ ರಿಲೆ ಮೊದಲಾದ ಸ್ಪರ್ಧೆಗಳು ನಡೆದವು.
ಈ ಸಂದರ್ಭ ಆಡಳಿತಾಧಿಕಾರಿಗಳಾದ ಸ್ಕ್ವಾಡ್ರನ್ ಲೀಡರ್ ಆರ್.ಕೆ ಡೇ, ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಪ್ರಕಾಶ್, ಜ್ಞಾನಗಂಗಾ ಶಾಲೆಯ ಪ್ರಾಂಶುಪಾಲ ಜಿ.ಜಿ.ಜೋಶ್, ಭಾರತೀಯ ವಿದ್ಯಾಭವನ್ ಕೊಡಗು ವಿದ್ಯಾಲಯ ಶಾಲೆಯ ಪ್ರಾಂಶುಪಾಲ ಸುಮಿತ್ರ ಕೆ.ಎಸ್, ಶಾಲೆಯ ವೈದ್ಯಾಧಿಕಾರಿ ಡಾ. ಮಹೇಶ್, ಬೋಧಕ, ಬೋಧಕೇತರ ವಿದ್ಯಾರ್ಥಿಗಳು ಮತ್ತು ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಕೆಡೆಟ್ ಭಾಸ್ಕರ್, ಕೆಡೆಟ್ ಸುಜಿತ್ ಬೀರಾದಾರ್, ಕೆಡೆಟ್ ದಾಕ್ಷಾಯಿಣಿ, ಸುಜಿತ್ ಓಬಳೇಶ್‍ರಾಯ್ ನಿರ್ವಹಿಸಿದರು.