ಮಡಿಕೇರಿ, ಡಿ. 5: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೊನ್ನಂಪೇಟೆ, ವೀರಾಜಪೇಟೆ ತಾಲೂಕಿನಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರುಗಳ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿತ್ತು. ಅದರಂತೆ ಸ್ವೀಕರಿಸಲಾದ ಅರ್ಜಿಗಳನ್ನು ತಾ. 4 ರಂದು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಗುರುತಿಸಲಾದ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಸಂಭವನೀಯ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಈ ಬಗ್ಗೆ ಸಂಭಂದಿಸಿದವರಿಂದ ಆಕ್ಷೇಪಣೆಗಳಿದ್ದಲ್ಲಿ ತಾ. 11ರ ಸಂಜೆ 5.30 ಗಂಟೆಯೊಳಗೆ ಸೂಕ್ತ ದಾಖಲಾತಿಯೊಂದಿಗೆ ಮನವಿಯನ್ನು ಖುದ್ದಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆಗೆ ಸಲ್ಲಿಸುವಂತೆ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.