ಮಡಿಕೇರಿ, ಡಿ. 5: ಕರ್ನಾಟಕ ಕಲಾ ಸಾಂಸ್ಕøತಿಕ ಪ್ರತಿಷ್ಠಾನ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು, ಮಾಧ್ಯಮ, ಸಾಹಿತ್ಯ ಹಾಗೂ ರಂಗಕಲಾ ಕ್ಷೇತ್ರದಲ್ಲಿ ಸಾಧನೆಗೆ ರಮೇಶ್ ಉತ್ತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ತಾ.7ರಂದು ಮೈಸೂರಿನ ಜೆಎಸ್‍ಎಸ್ ಹಳೆಯ ಆಸ್ಪತ್ರೆ ಆವರಣದಲ್ಲಿರುವ ಡಾ. ಶಿವರಾತ್ರಿ ರಾಜೇಂದ್ರ ಭವನ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಕರ್ನಾಟಕ ಕಲಾ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ತಿಳಿಸಿದ್ದಾರೆ.
ಮೈಸೂರು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ರುವ ಐತಿಚಂಡ ರಮೇಶ್ ಉತ್ತಪ್ಪ ಅವರು ಪತ್ರಿಕೋದ್ಯಮದೊಂದಿಗೆ ಸಾಹಿತ್ಯ ಹಾಗೂ ರಂಗಭೂಮಿಯಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಇವರ ಸಂಶೋಧನೆ ಸೇರಿದಂತೆ 23 ಕೃತಿಗಳನ್ನು ಬರೆದಿದ್ದಾರೆ. ಸುಮಾರು 300ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ನಿರ್ದೇಶಿಸಿದ್ದಾರೆ. ಎರಡು ನಾಟಕ ಪುಸ್ತಕಗಳನ್ನು ರಚಿಸಿದ್ದಾರೆ.