ಕೂಡಿಗೆ, ಡಿ. 4: ಕೂಡಿಗೆ ಕೆನರಾ ಬ್ಯಾಂಕ್‍ನ 42ನೇ ವಾರ್ಷಿಕೋತ್ಸವ ಆಚರಣೆಯನ್ನು ಬ್ಯಾಂಕ್‍ನ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ಯಾಂಕ್‍ನ ಹಿರಿಯ ಅಧಿಕಾರಿ ವಿ.ಜಿ. ಅರುಣ್ ನೆರವೇರಿಸಿದರು.
ಈ ಸಂದರ್ಭ ಬ್ಯಾಂಕ್‍ನ 100 ಗ್ರಾಹಕರಿಗೆ ಅಭಿನಂದನೆ ಹಾಗೂ ವಿದ್ಯಾಜ್ಯೋತಿ ಯೋಜನೆಯಡಿ 6 ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಗ್ರಾಹಕರಾದ ಕೃಷ್ಣಪ್ಪ, ಎಂ.ಬಿ. ಜಯಂತ್ ಪುಟ್ಟಮ್ಮ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಕೂಡಿಗೆ ಬ್ಯಾಂಕ್‍ನ ವ್ಯವಸ್ಥಾಪಕ ಕಿಶೋರ್‍ಕುಮಾರ್, ಶಿವಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹಾಜರಿದ್ದರು.