*ಗೋಣಿಕೊಪ್ಪಲು, ಡಿ. 5: ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ತಾ. 7ರಂದು ಕೊಕ್ಕಲೆಮಾಡ ಮುತ್ತಣ್ಣ, ಪಾರುವಂಗಡ ಜಿ.ಕಾರ್ಯಪ್ಪ ದತ್ತಿ ನಿಧಿ ಭಾವಗೀತೆ ಸ್ಪರ್ಧೆ ನಡೆಯಲಿದೆ.

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಡೆಯಲಿರುವ ಭಾವಗೀತೆ ಸ್ಪರ್ಧೆಯನ್ನು ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ನಿರ್ದೇಶಕ ಕಾಟಿಮಾಡ ಶರೀನ್ ಮುತ್ತಣ್ಣ ಉದ್ಘಾಟಿಸಲಿದ್ದಾರೆ. ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಎಜುಕೇಷನ್ ಸೊಸೈಟಿ ನಿರ್ದೇಶಕ ಅಳಮೇಂಗಡ ಸುರೇಶ್ ಸುಬ್ಬಯ್ಯ ಕಾಲೇಜಿಗೆ ಕೊಡುಗೆಯಾಗಿ ನೀಡಿರುವ ರಾಷ್ಟ್ರನಾಯಕರ ಭಾವಚಿತ್ರವನ್ನು ಅನಾವರಣ ಮಾಡಲಾಗುತ್ತದೆ.