ಸೋಮವಾರಪೇಟೆ, ಡಿ. 5: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಯುವಕ ಸಂಘದ ಮಾಜಿ ಅಧ್ಯಕ್ಷ ಮನುಕುಮಾರ್ ರೈ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಆಲೇಕಟ್ಟೆ ರಸ್ತೆಯಲ್ಲಿರುವ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ, ಸಂಘದ ಪದಾಧಿಕಾರಿಗಳು ಮನುಕುಮಾರ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಶಶಿ ತಿಮ್ಮಯ್ಯ, ಖಜಾಂಚಿ ಜನಾರ್ಧನ್, ಸಹಕಾರ್ಯದರ್ಶಿ ಶ್ರೀಜಿತ್, ಗ್ರಾ.ಪಂ. ಸದಸ್ಯರಾದ ಧರ್ಮ, ನರಸಿಂಹ ಸೇರಿದಂತೆ ಇತರರು ಉಪಸ್ಥಿತರಿದ್ದರು.