ಮಡಿಕೇರಿ, ಡಿ. 5: ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಎಐಡಿಎಸ್‍ಒ ಹಾಗೂ ಕೊಡಗು ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ವತಿಯಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸುಮುಖ್ ಮಾತನಾಡಿ ಸ್ತ್ರೀ ಶೋಷಣೆಯನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್‍ಓ ಸಂಘಟನೆಯ ಪ್ರಮುಖರು ಹಾಗೂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.