ನಾಪೋಕ್ಲು, ಡಿ.5: ಸ್ಥಳೀಯ ಶ್ರೀರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡೋತ್ಸವ ತಾ. 7ರಂದು ನಡೆಯಲಿದೆ. ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡೋತ್ಸವದಲ್ಲಿ ನಬಾರ್ಡ್‍ನ ನಿವೃತ್ತ ಸಹಾಯಕ ವ್ಯವಸ್ಥಾಪಕ ಮುಂಡಂಡ ಸಿ. ನಾಣಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಡಾ.ಬಿ.ಎಂ. ಬೋಪಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ವಾರ್ಷಿಕೋತ್ಸವವು ತಾ.21ರಂದು ಶಾಲಾ ಆವರಣದಲ್ಲಿ 1.30 ಗಂಟೆಗೆ ನಡೆಯಲಿದೆ. ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಟ್ಟಡ ಎ. ಪೂವಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಡಾ.ಬಿ.ಎಂ. ಬೋಪಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.