ಮಡಿಕೇರಿ, ಡಿ. 5: ಮೈಸೂರಿನ ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಟ್ಟಗಳ್ಳಿಯ ಎಸ್‍ವಿಜಿ ವಿಶ್ವಪ್ರಜ್ಞ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಚನ್ ಅಪ್ಪಣ್ಣಮಯ್ಯ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಯಿತು. ಮೂಲತಃ ಕೊಡಗಿನ ಪೊನ್ನಂಪೇಟೆಯವರಾದ ಇವರು ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಕಾಂ., ಎಂ.ಬಿಎ, ಎಂ.ಎ. ಅರ್ಥಶಾಸ್ತ್ರ ಹಾಗೂ ಪಿಜಿಡಿಸಿಎ ಪದವಿಯನ್ನು ಪಡೆದು ಕಳೆದ ಹದಿನೇಳು ವರ್ಷಗಳಿಂದ ಉಪನ್ಯಾಸಕನಾಗಿ, ಡೀನ್ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಎ ಮತ್ತು ಟ್ಯಾಲಿ ತರಬೇತಿದಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.