ಮಡಿಕೇರಿ, ಡಿ. 6: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬೆಂಗಳೂರು ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಬೋಧನಾ ಕೊಠಡಿಗಳು ಹಾಗೂ ಕಂಪ್ಯೂಟರ್ ಲ್ಯಾಬ್ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 7 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಬೋಧಸ್ವರೂಪ ನಂದಜೀ ಮಹಾರಾಜ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್, ಶಕ್ತಿ ದಿನಪತ್ರಿಕೆಯ ವ್ಯವಸ್ಥಾಪಕಿ ಪ್ರಜ್ಞಾ, ಇತರರು ಪಾಲ್ಗೊಳ್ಳಲಿದ್ದಾರೆ.