ವೀರಾಜಪೇಟೆ, ಡಿ. 6: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವೀರಾಜಪೇಟೆ ಮಡಿಕೇರಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವೀರಾಜಪೇಟೆ ವಲಯ ಇವರ ಸಹಯೋಗದೊಂದಿಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ವೀರಾಜಪೇಟೆಯ ತ್ರಿವೇಣಿ ಪ್ರೌಢಶಾಲೆಯ ಸಭಾಂಗಣದಲ್ಲಿ ತಾ.8 ರಂದು ಬೆಳಿಗ್ಗೆ 8 ಗಂಟೆಗೆ ನಡೆಯಲಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ರತ್ನ ಮೈಪಾಳ ತಿಳಿಸಿದ್ದಾರೆ.

ಒಕ್ಕೂಟಗಳ ಪದಗ್ರಹಣ ಸಮಾರಂಭ ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ವೀರಾಜಪೇಟೆ ತಾಲೂಕು ಪಂಚಾಯತ್ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲೆಯ ನಿರ್ದೇಶಕ ಡಾ.ಎ. ಯೋಗೀಶ್, ಜಿಲ್ಲಾ ಪಂಚಾಯತ್ ಸದಸ್ಯ ಮೂಕೋಂಡ ಶಶಿ ಸುಬ್ರಮಣಿ, ಅಚ್ಚಪಂಡ ಮಹೇಶ್ ಗಣಪತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಬಾನಂಗಡ ಅರುಣ್, ಕೊಡವ ಸಮಾಜದ ಅಧ್ಯಕ್ಷ ವಾಂಚೀರ ನಾಣಯ್ಯ, ತ್ರಿವೇಣಿ ಪ್ರೌಢಶಾಲೆಯ ಅಧ್ಯಕ್ಷ ಅಪಾಡಂಡ ಕಾರ್ಯಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ, ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಹೆಚ್.ಎಂ. ಮರೀಸ್ವಾಮಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್, ಗ್ರಾಮಾಂತರ ಪೋಲಿಸ್ ಠಾಣೆ ಉಪನಿರೀಕ್ಷಕರಾದ ವೀಣಾ ನಾಯಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸದಾಶಿವಗೌಡ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.