ವೀರಾಜಪೇಟೆ, ಡಿ. 6: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಅಮ್ಮತ್ತಿ ಪ್ರೌಢಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ತಾ.7ರಂದು (ಇಂದು) ಮಧ್ಯಾಹ್ನ 2 ಗಂಟೆಗೆ ಅಮ್ಮತ್ತಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೋಕೇಶ್ ಸಾಗರ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಅಧ್ಯಕ್ಷತೆಯನ್ನು ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮೂಕೋಂಡ ಶಶಿ ಸುಬ್ರಮಣಿ, ಅಮ್ಮತ್ತಿ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಕಂಡ್ರತಂಡ ಕರ್ನಲ್ ಸುಬ್ಬಯ್ಯ, ನಿರ್ದೇಶÀಕ ಮಂಡೇಪಂಡ ಸುಗುಣ ಮುತ್ತಣ್ಣ, ಶಾಲಾ ಮುಖ್ಯೋಪಾಧ್ಯಾಯ ಟಿ.ಸದಾನಂದ, ಅಮ್ಮತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಕ್ಕಚ್ಚೀರ ರೋನಾ ಭೀಮಯ್ಯ ಆಗಮಿಸಲಿದ್ದಾರೆ.
ವೀರಾಜಪೇಟೆ ಕಾವೇರಿ ಕಾಲೇಜಿನ ಉಪನ್ಯಾಸಕಿ ಮುಲ್ಲೇಂಗಡ ರೇವತಿ ಪೂವಯ್ಯ ಕೊಡವ ಸಂಸ್ಕøತಿ, ಮಹಿಳೆ ಮತ್ತು ಸಾಹಿತ್ಯ ಎಂಬ ವಿಚಾರದ ಕುರಿತು ಹಾಗೂ ಪಾಲಿಬೆಟ್ಟ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವದಾಸ್ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಮಹನೀಯರುಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ವಿಶೇಷ ಆಹ್ವಾನಿತರುಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಮ್ಮತ್ತಿ ಹೋಬಳಿ ಘಟಕದ ಅಧ್ಯಕ್ಷ ಜಾನ್ಸನ್, ವೀರಾಜಪೇಟೆ ತಾಲೂಕು ಕಾರ್ಯದರ್ಶಿ ಆರ್. ಸುಬ್ರಮಣಿ, ನಿರ್ದೇಶಕ ಗುರುದರ್ಶನ್ ಆಗಮಿಸಲಿದ್ದಾರೆ ಎಂದು ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ.