*ಸಿದ್ದಾಪುರ, ಡಿ.6: ಶ್ರೀ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕೆ.ಸಿ.ಬೋಪಣ್ಣ ರಾಜ್ಯ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿದ್ದ ಅಥ್ಲೆಟಿಕ್ಸ್ ಉದ್ದ ಜಿಗಿತ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಉದ್ದಜಿಗಿತದಲ್ಲಿ 6.73 ಮೀಟರ್ ಹಾರಿ ಪ್ರಥಮ ಸ್ಥಾನ ಪಡೆದ ಬೋಪಣ್ಣ ತಾ.9 ರಂದು ಪಂಜಾಬಿನ ಪಾಟಿಯಾಲದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.