ಮಡಿಕೇರಿ, ಡಿ. 7: ಜಿಲ್ಲೆಯ ಸಾರ್ವಜನಿಕ ಹಿತರಕ್ಷಣಾ ಸಮಿತಿಯು ಪ್ರಧಾನಿ ಮೋದಿಯವರಿಗೆ ‘ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ’ಗಳಿಗೆ ಎಲ್ಲಾ ರೀತಿಯ ಔಷಧಿಗಳನ್ನು ಸರಬರಾಜು ಮಾಡುವಂತೆ ಕೋರಿ ಪತ್ರ ಬರೆದಿದೆ.
ಖಾಸಗಿ ಔಷಧಿ ಅಂಗಡಿಗಳಲ್ಲಿ ಔಷಧಿಗಳು ದುಬಾರಿಯಾಗಿದ್ದು, ‘ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ’ಗಳಲ್ಲಿ ಕಡಿಮೆ ದರದಲ್ಲಿ ಔಷಧಿಗಳನ್ನು ಖರೀದಿ ಮಾಡಬಹುದಾಗಿದೆ. ಆದರೆ, ಈ ಕೇಂದ್ರಗಳಲ್ಲಿ ಕೆಲವು ಔಷಧಿಗಳು ಲಭ್ಯವಾಗದ ಕಾರಣ ಬಡ ಜನರಿಗೆ ಖಾಸಗಿ ಔಷಧಿ ಅಂಗಡಿಗಳಿಂದ ಔಷಧಿಗಳನ್ನು ಖರೀದಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಈ ಕೇಂದ್ರಗಳಿಗೆ ಸಕಾಲಿಕವಾಗಿ ಎಲ್ಲಾ ರೀತಿಯ ಔಷಧಿಗಳನ್ನು ಸರಬರಾಜು ಮಾಡುವ ವ್ಯವಸ್ಥೆ ಆದಷ್ಟು ಬೇಗ ಆಗಬೇಕಿದೆ ಎಂದು ಸಮಿತಿಯ ಅಧ್ಯಕ್ಷ ಎ.ಎಸ್. ಕಟ್ಟಿಮಂದಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.