ಒಡೆಯನಪುರ, ಡಿ. 7: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 14ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಸಮ್ಮೇಳನ ನಡೆಯುವ ಸ್ಥಳ ಮತ್ತು ದಿನಾಂಕವನ್ನು ನಿಗದಿ ಪಡಿಸಲಾಯಿತು. ಸಮೀಪದ ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಸುವ ಕುರಿತು ಸ್ಥಳೀಯ ಪ್ರಮುಖರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಡೆದ ಚರ್ಚೆಯಲ್ಲಿ 14ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಿಡ್ತ ಸರಕಾರಿ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಮುಂದಿನ ಜನವರಿ 31 ಮತ್ತು ಫೆ. 1ರಂದು 2 ದಿನದವರೆಗೆ ಸಮ್ಮೇಳನ ನಡೆಸುವಂತೆ ನಿರ್ಣಯ ತೆಗೆದುಕೊಳ್ಳಲಾಯಿತು. ಸಮ್ಮೇಳನದ ರೂಪುರೇಷೆಗಳ ಕುರಿತು ತಾ.14ರಂದು ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಪೂರ್ವ ಭಾವಿ ಸಭೆ ಕರೆದು ಚರ್ಚಿಸುವ ಬಗ್ಗೆ ತೀರ್ಮಾನಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಕನ್ನಡ ಭಾಷೆ, ಸಂಸ್ಕøತಿ, ಹಳ್ಳಿಗಾಡಿನ ಸೊಗಡು, ಗ್ರಾಮೀಣ ಭಾಗದ ಕನ್ನಡ ಶಾಲೆಗಳ ಉಳಿವು ಮುಂತಾದ ಕನ್ನಡತನ ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತದೆ ಎಂದರು. ಕಸಾಪದಿಂದ ಜಿಲ್ಲೆಯಲ್ಲಿ ಹಲವಾರು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿದ್ದು, ಗ್ರಾಮೀಣ ಭಾಗದ ರೈತರು ಮತ್ತು ಸರಕಾರಿ ಕನ್ನಡ ಶಾಲೆಗಳ ಅಭಿವೃದ್ಧಿ ದೃಷ್ಟಿಯಿಂದ ಪ್ರಥಮ ಬಾರಿಗೆ ಹಳ್ಳಿಯೊಂದರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ. ಸ್ಥಳೀಯರು ಸಮ್ಮೇಳನದ ಯಶಸ್ವಿಗೆ ಪ್ರೋತ್ಸಾಹಿಸಿ ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಜಿ.ಪಂ. ಮಾಜಿ ಸದಸ್ಯ ಡಿ.ಬಿ.ಧರ್ಮಪ್ಪ, ಸುಬ್ಬಪ್ಪ, ಕೃಷಿ ಸಹಕಾರ ಸಂಘದ ಪುಟ್ಟಸ್ವಾಮಿ ಸಮ್ಮೇಳದ ಯಶಸ್ವಿಗೆ ಸಹಕರಿಸುವ ದಾಗಿ ಭರವಸೆ ನೀಡಿದರು. ಸಭೆಯಲ್ಲಿ ಶನಿವಾರಸಂತೆ ಹೋಬಳಿ ಕಸಾಪ ಅಧ್ಯಕ್ಷ ಬಿ.ಬಿ. ನಾಗರಾಜು, ಕೋಶಾಧಿಕಾರಿ ಡಿ.ಬಿ.ಸೋಮಪ್ಪ, ಕಸಾಪ ಜಿಲ್ಲಾ ಘಟಕದ ಕೋಶಾಧಿ ಕಾರಿ ಎಸ್.ಎ. ಮುರಳೀಧರ್, ಕಸಾಪ ತಾಲೂಕು ಪ್ರಮುಖರಾದ ಪ್ರಸನ್ನ, ಜವರಪ್ಪ, ಗ್ರಾ.ಪಂ. ಸದಸ್ಯರುಗಳಾದ ವಿಜಯ್‍ಕುಮಾರ್, ಹೂವಮ್ಮ, ವಿಶಾಲಮ್ಮ, ನಿಡ್ತ ಪ್ರಾಥಮಿಕ ಶಾಲಾ ಸಹ ಶಿಕ್ಷಕಿ ರತ್ನ, ತಾಲೂಕು, ಹೋಬಳಿ ಕಸಾಪ ಘಟಕದ ಪದಾಧಿಕಾರಿಗಳು ಮತ್ತು ಸಾರ್ವಜನಿಕ ಪ್ರಮುಖರು ಹಾಜರಿದ್ದರು.