ನಾಪೆÇೀಕ್ಲು, ಡಿ. 7: ಎಲ್ಲರೂ ವಿದ್ಯಾವಂತರಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಸಮಾಜಸೇವಕ, ಕಾಫಿ ಬೆಳೆಗಾರ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು.
ಕಕ್ಕಬೆ ಕೇಂದ್ರ ವಿದ್ಯಾ ಸಂಸ್ಥೆಯ ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯ ದೊಂದಿಗೆ ಪಠ್ಯೇತರ ಚಟುವಟಿಕೆ ಗಳಲ್ಲಿಯೂ ತಮ್ಮನ್ನು ತೊಡಗಿಸಿ ಕೊಳ್ಳಬೇಕು. ತಂತ್ರಜ್ಞಾನದ ಸದ್ಭಳಕೆಯಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ ವಹಿಸಿದ್ದರು. ಪ್ರೌಢಶಾಲಾ ವಾರ್ಷಿಕ ವರದಿಯನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕ ಅನಿಲ್ ರಾಜ್, ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ವಾರ್ಷಿಕ ವರದಿಯನ್ನು ಮುಖ್ಯ ಶಿಕ್ಷಕಿ ಚಂಡೀರ ಲೀಲಾವತಿ ವಾಚಿಸಿದರು.
ವೇದಿಕೆಯಲ್ಲಿ ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷತೆ ಕರ್ತಂಡ ಶೈಲಾ ಕುಟ್ಟಪ್ಪ, ಮಡಿಕೇರಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬೊಳಿ ಯಾಡಿರ ಸಂತು ಸುಬ್ರಮಣಿ, ಆಡಳಿತ ಮಂಡಳಿ ಉಪಾಧ್ಯಕ್ಷ ಪೈಯಡಿ ಹಂಸ, ಬಾತ್ಮೀದಾರ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಕರಾದ ಪರದಂಡ ಸದಾ ನಾಣಯ್ಯ, ಚೋಯಮಾಡಂಡ ಅರುಣ ನಾಣಯ್ಯ, ಕೋಟೆರ ನೈಲ್ ಚಂಗಪ್ಪ ಮತ್ತಿತರರಿದ್ದರು.
ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಆಡಳಿತ ಮಂಡಳಿ ನಿರ್ದೇಶಕ ಬಡಕಡ ದೀನಾ ಪೂವಯ್ಯ ಸ್ವಾಗತಿಸಿದರು. ಶಿಕ್ಷಕಿ ಅರೆಯಡ ಬಬಿತ ನಿರೂಪಿಸಿ, ಶಿಕ್ಷಕಿ ಅನ್ನಾಡಿಯಂಡ ತ್ರಿವೇಣಿ ವಂದಿಸಿದರು.
ಕಾರ್ಯಕ್ರಮದ ಪ್ರಯುಕ್ತ ಬೆಳಿಗ್ಗೆ ನಡೆದ ಧ್ವಜಾರೋಹಣವನ್ನು ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕÉ್ಷ ಕರ್ತಂಡ ಶೈಲಾ ಕುಟ್ಟಪ್ಪ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಮೂಹಿಕ ಪಥಸಂಚಲನ, ಯೋಗಾಸನ, ಕರಾಟೆ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.