ಗೋಣಿಕೊಪ್ಪಲು, ಡಿ. 7: ಅಮ್ಮತ್ತಿಯ ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಅಮ್ಮತ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮಾಚಿಮಂಡ ಮಧು ಮಾದಪ್ಪ, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿದ್ದರು.