ಮಡಿಕೇರಿ, ಡಿ. 7 : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ತಂಡವು ತಾ. 10 ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದೆ.
ತಾ. 10 ಮತ್ತು 11 ರಂದು ಜಿಲ್ಲೆಯ ವಿವಿಧ ತಾಲೂಕುಗಳ ನ್ಯಾಯಬೆಲೆ ಅಂಗಡಿ, ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಮಧ್ಯಾಹ್ನದ ಊಟ ಯೋಜನೆ, ಎಂಎಸ್‍ಪಿಟಿಸಿ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ತಾ. 12 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನುಷ್ಠಾನದ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಯೋಜನೆಗಳ ಅನುಷ್ಠಾನ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಲಿದ್ದಾರೆ.