ಮಡಿಕೇರಿ ಡಿ.7 : ಶೋಷಿತ ಸಮುದಾಯದ ಸಮಸ್ಯೆಗಳಿಗೆ ಮುಂದಿನ ಹದಿನೈದು ದಿನಗಳ ಒಳಗಾಗಿ ಅಗತ್ಯ ಪರಿಹಾರ ಸೂಚಿಸದಿದ್ದಲ್ಲಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸುವದಾಗಿ ಪ್ರಜಾಪರಿವರ್ತನಾ ವೇದಿಕೆ ಹೇಳಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಸಂಕಷ್ಟದ ಬದುಕು ನಡೆಸುತ್ತಿರುವ ಪರಿಶಿಷ್ಟ ಜಾತಿ-ಪಂಗಡದ ಯಾವದೇ ಸಮಸ್ಯೆ ಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಬಗೆಹರಿಸಲು ಜಿಲ್ಲಾಡಳಿತ ಆಸಕ್ತಿ ತೋರುತ್ತಿಲ್ಲವೆಂದರು.
ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆತಟ್ಟು ಕಾಲೋನಿ ನಿವಾಸಿಗಳು ಮೂಲಭೂತ ಸೌಲಭ್ಯಗಳಿಲ್ಲದೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಡಿ ಕಾಲೋನಿಗೆ ವಿದ್ಯುತ್ ಸಂಪರ್ಕಕ್ಕೆ ಅಗತ್ಯ ಕೆಲಸ ನಡೆಸಿದ್ದರು, ವಿದ್ಯುತ್ ಸಂಪರ್ಕವನ್ನು ನಿವಾಸಿಗಳಿಗೆ ಒದಗಿಸದೆ ಸಮಸ್ಯೆ ಯನ್ನು ಸೃಷ್ಟಿಸಲಾಗಿದೆ ಎಂದರು.
ಎರಡು ವಾರಗಳ ಒಳಗೆ ಸಮಸ್ಯೆಗಳಿಗೆ ಸ್ಪಂದನೆ ದೊರೆಯದಿದ್ದಲ್ಲಿ ಪರಿಶಿಷ್ಟ ಸಮುದಾಯ ಮತ್ತು ಸಾರ್ವಜನಿಕÀರ ಸಹಕರದೊಂದಿಗೆ ಸತ್ಯಾಗ್ರಹ ನಡೆಸುವದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಕೆ.ಎ.ಹೊನ್ನಪ್ಪ, ಮಡಿಕೆÉೀರಿ ತಾಲೂಕು ಅಧ್ಯಕ್ಷ ಸಿ.ಜೆ.ರಮೇಶ್ ಹಾಗೂ ನಾಪೋಕ್ಲು ಹೋಬಳಿ ಅಧ್ಯಕ್ಷ ಸಾಬು ಉಪಸ್ಥಿತರಿದ್ದರು.