ಸೋಮವಾರಪೇಟೆ, ಡಿ. 7: ಸಮೀಪದ ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾತೃವಂದನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಆಸ್ಪತ್ರೆಯ ವೈದ್ಯಾಧಿಕಾರಿ ಇಂದೂಧರ್ ಉದ್ಘಾಟಿಸಿದರು. ನಂತರ ಮಾತನಾಡಿ, ಗರ್ಭಿಣಿಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ತಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು. ಪ್ರತಿಯೊಂದು ಸಮಸ್ಯೆಗಳಿಗೆ ವೈದ್ಯರ ಸಲಹೆಯೊಂದಿಗೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ನಿರ್ಮಲ, ಗೌಡಳ್ಳಿ ಗ್ರಾಪಂ ಕಾರ್ಯದರ್ಶಿ ವಿಶ್ವನಾಥ್, ಗ್ರಾಪಂ ಸದಸ್ಯೆ ಪ್ರೇಮ ಮತ್ತಿತರರು ಉಪಸ್ಥಿತರಿದ್ದರು.