ಮಡಿಕೇರಿ, ಡಿ. 8: ಪ್ರಸಕ್ತ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಬ್ಯಾಡ್ಮಿಂಟನ್ ಪಂದ್ಯಾವಳಿ ತಾ. 27 ರಿಂದ 2020ರ ಜನವರಿ 2 ರವರೆಗೆ ಗುಜರಾತ್‍ನ ಗಾಂಧಿನಗರದ ಜಿಮ್ಕಾನ ಸಚಿವಾಲಯದಲ್ಲಿ ನಡೆಯಲಿದ್ದು, ಈ ಸಂಬಂಧ ಅಖಿಲ ಭಾರತ ನಾಗರಿಕ ಸೇವಾ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ರಾಜ್ಯಮಟ್ಟದ ಸರ್ಕಾರಿ ನೌಕರರ ಪುರುಷ ಮತ್ತು ಮಹಿಳಾ ತಂಡಗಳನ್ನು ಆಯ್ಕೆ ಮಾಡಬೇಕಿರುವದರಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೋಮವಾರಪೇಟೆ ಮತ್ತು ವೀರಾಜಪೇಟೆಯ, ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ 2019-20ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಬ್ಯಾಡ್ಮಿಂಟನ್ ಪಂದ್ಯಾವಳಿಯು ತಾ. 10 ರಂದು ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಸಕ್ತ ಪುರುಷ ಹಾಗೂ ಮಹಿಳಾ ರಾಜ್ಯ ಸರ್ಕಾರಿ ನೌಕರರ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.