ಕೂಡಿಗೆ, ಡಿ. 8: ಶಿವಮೊಗ್ಗದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶೈಲಾ 1500 ಮೀಟರ್ ಓಟದಲ್ಲಿ ಹಾಗೂ 400 ಮೀಟರ್ ಹರ್ಡಲ್ಸ್‍ನಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ತಾ. 11 ರಂದು ಪಂಜಾಬ್‍ನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆಯಲಿದೆ.