ಮಡಿಕೇರಿ, ಡಿ. 8: ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳವನ್ನು ಶನಿವಾರದಿಂದ ಪುನರ್ ಪ್ರಾರಂಭಿಸಲಾಗಿದೆ. ಈಜುಕೊಳದಲ್ಲಿ ಈಜಲು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ ತಿಳಿಸಿದ್ದಾರೆ.